ಹೊಸದಿಗಂತ ವರದಿ ಬಳ್ಳಾರಿ:
ನಗರದ ಕಪ್ಪಗಲ್ಲು ರಸ್ತೆಯ ಶ್ರೀಕೃಷ್ಣ ಮಠದಲ್ಲಿ ಕೃಷ್ಣ ಜನ್ಮಾಷ್ಠಮಿಯನ್ನು ಅತ್ಯುತ್ತಮ ವಿಜೃಂಭಣೆಯಿಂದ ಆಚರಿಸಲಾಯಿತು. ಇಂದು ಬೆಳಿಗ್ಗೆ ಶ್ರೀ ಕೃಷ್ಣನಿಗೆ ನವನೀತ ಅಲಂಕಾರ, ಮಹಾಮಂಗಳಾರತಿ ನೇರವೇರಿಸಲಾಗಿದೆ.
ಇಂದು ಸಂಜೆ ಮುದ್ದು ಮಕ್ಕಳಿಂದ ಶ್ರೀಕೃಷ್ಣನ ವೇಷಭೂಷಣಗಳ ಸ್ಪರ್ಧೆ, 10 ವರ್ಷದ ಒಳಗಿನ ಮಕ್ಕಳಿಂದ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ನಡೆಯಲಿದೆ. ನಂತರ ಮಹಾ ರಥೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ.
ನಿನ್ನೆ ಬೆಳಿಗ್ಗೆ ಶ್ರೀಮಠದ ಪ್ರಧಾನ ಅರ್ಚಕರಾದ ಪಂ.ನಾಗರಾಜ್ ಆಚಾರ್ ಅವರ ನೇತೃತ್ವದಲ್ಲಿ ಶ್ರೀ ಕೃಷ್ಣನಿಗೆ ವಿಶೇಷ ಪೂಜೆ, ಶ್ರೀ ವಿಷ್ಣು ಸಹಸ್ರನಾಮಾರ್ಚನೆ, ತುಳಸಿ ಅರ್ಚನೆ, ವಿಶೇಷ ಅಲಂಕಾರ ಮಹಾಮಂಗಳಾರತಿ ಸೇರಿದಂತೆ ವಿವಿಧ ಪೂಜೆಗಳು ನಡೆದವು.
ಸಂಜೆ ವಿವಿಧ ಭಜನಾ ಮಂಡಳಿ ಸದಸ್ಯರಿಂದ ಸಾಮೂಹಿಕ ಭಜನೆ, ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ವೇಷಭೂಷಣಗಳ ಸ್ಪರ್ಧೆ, ಕೋಲಾಟ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆದವು. ರಾತ್ರಿ 11.45ಕ್ಕೆ ಸಾಮೂಹಿಕ ಅರ್ಘ್ಯ ಪ್ರಧಾನ ಮಾಡಲಾಯಿತು. ನಗರ ಸೇರಿದಂತೆ ನಾನಾ ಕಡೆಯಿಂದ ಆಗಮಿಸಿದ ಸಾವಿರಾರು ಭಕ್ತರು ಶ್ರೀಕೃಷ್ಣನ ದರ್ಶನ ಪಡೆದು ಭಕ್ತಿ ಸಮರ್ಪಿಸಿದರು.