KRS ಡ್ಯಾಂ ಹೊಸ ಇತಿಹಾಸ ನಿರ್ಮಾಣ: ಜನವರಿಯಲ್ಲೂ ಗರಿಷ್ಠ 124 ಅಡಿ ನೀರು ಭರ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಸೂರು ಮತ್ತು ಬೆಂಗಳೂರಿನ ಜೀವನಾಡಿ ಶ್ರೀರಂಗಪಟ್ಟಣದ ಕನ್ನಂಬಾಡಿ ಅಣೆಕಟ್ಟು ಹೊಸ ಇತಿಹಾಸ ಬರೆದಿದೆ. ಜನವರಿಯಲ್ಲೂ ಗರಿಷ್ಠ 124 ಅಡಿ ನೀರು ಸಂಗ್ರಹವಾಗಿದೆ.

ಕೃಷ್ಣರಾಜಸಾಗರ ಜಲಾಶಯ ನಿರ್ಮಾಣದ ನಂತರ ಮೊದಲ ಬಾರಿಗೆ ಈ ದಾಖಲೆ ನಿರ್ಮಿಸಲಾಗಿದೆ. ಇದು ಕಳೆದ 156 ದಿನಗಳಿಂದ ಸತತವಾಗಿ 124 ಅಡಿ ಎತ್ತರವನ್ನು ಕಾಯ್ದುಕೊಂಡಿದೆ.

ಈಗಲೂ ಜಲಾಶಯ ಭರ್ತಿಯಾಗಿರುವ ಕಾರಣ ಈ ಬೇಸಿಗೆಯಲ್ಲಿ ಅನ್ನದಾತರು, ವಿಶೇಷವಾಗಿ ಬೆಂಗಳೂರಿಗರಿಗೆ ನೀರಿನ ಅಭಾವ ಸೃಷ್ಟಿಯಾಗಲಾರದು. ಈ ಹಂತದಲ್ಲಿ ಸರ್ಕಾರ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. ಹೀಗಾಗಿ ಮಂಗಳವಾರ ನಡೆದ ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ರೈತರಿಗೆ ಬೇಸಿಗೆ ಬೆಳೆ ಬೆಳೆಯಲು ನೀರು ಕೊಡಲು ಸರ್ಕಾರ ನಿರ್ಧರಿಸಿದೆ. ಸರ್ಕಾರದ ಈ ನಿರ್ಧಾರದಿಂದ ರೈತರು ಸುಗ್ಗಿ ಹಬ್ಬವನ್ನು ಸಂಭ್ರಮದಿಂದ ಆಚರಿಸುವಂತಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!