Monday, August 8, 2022

Latest Posts

ಕೆಆರ್’ಎಸ್ ಅಣೆಕಟ್ಟೆ ಬಿರುಕು ಬಿಟ್ಟಿಲ್ಲ: ಸಚಿವ ಮುರುಗೇಶ ನಿರಾಣಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ವಿಜಯಪುರ:

ಕೆಆರ್’ಎಸ್ ಅಣೆಕಟ್ಟೆಯಲ್ಲಿ ಬಿರುಕು ಬಿಟ್ಟಿಲ್ಲ, ರೈತರು ಉಹಾಪೋಹಗಳಿಗೆ ಕಿವಿಕೊಡಬಾರದು ಎಂದು ಗಣಿ ಹಾಗೂ ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು.

ಜಿಲ್ಲೆಯ ಕೊಲ್ಹಾರದಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಕೆಆರ್’ಎಸ್ ಅಣೆಕಟ್ಟೆ ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಡಿ ಗಣಿಗಾರಿಕೆ ಬಂದ್ ಮಾಡಲಾಗಿದೆ. ಅಣೆಕಟ್ಟೆಗೆ ಯಾವುದೇ ರೀತಿಯ ಧಕ್ಕೆಯಿಲ್ಲ. ಬಿರುಕು ಬಿಟ್ಟಿರುವುದು ಕೇವಲ ಉಹಾಪೋಹಗಳು ಮಾತ್ರ. ಯಾವುದೇ ಅಪಾಯಕರ ಮುನ್ಸೂಚನೆ ಇಲ್ಲ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss