October 16, 2026
Friday, October 16, 2026
spot_img

ಕೆಆರ್‌ಎಸ್ ಮಟ್ಟ ಇಳಿಕೆ: ಆತಂಕ ಬೇಡ.. ಬೇಸಿಗೆಯಲ್ಲೂ ಬತ್ತಲ್ಲ ಮೈಸೂರು-ಬೆಂಗಳೂರು ದಾಹ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯ ಜಿಲ್ಲೆಯ ಜೀವನಾಡಿ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ 110 ಅಡಿಗೆ ಇಳಿಕೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಒಟ್ಟು 124.80 ಅಡಿ ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 110.44 ಅಡಿ ನೀರು ಸಂಗ್ರಹವಿದ್ದು (ಅಂದಾಜು 32.167 ಟಿಎಂಸಿ), ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಅಭಾವ ಉಂಟಾಗಬಹುದೇ ಎಂಬ ಪ್ರಶ್ನೆ ಎದ್ದಿದೆ.

ಆದರೆ, “ಜೂನ್-ಜುಲೈ ತಿಂಗಳವರೆಗೂ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗುವುದಿಲ್ಲ” ಎಂದು ಕಾವೇರಿ ನಿರಾವರಿ ನಿಗಮದ ಅಧಿಕಾರಿಗಳು ಅಭಯ ನೀಡಿದ್ದಾರೆ.

Must Read