Thursday, August 11, 2022

Latest Posts

ಪ್ರವಾಸೋದ್ಯಮ ಸಚಿವರಿಂದ ಕೆ.ಆರ್.ಎಸ್. ನಡುಗಡ್ಡೆ ದ್ವೀಪ ವೀಕ್ಷಣೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ಮಂಡ್ಯ :

ಪ್ರವಾಸೋಧ್ಯಮ ಇಲಾಖೆ ವತಿಯಿಂದ ಕೃಷ್ಣರಾಜಸಾಗರದ ಹಿನ್ನೀರಿನಲ್ಲಿ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಉದ್ದೇಶದಿಂದ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್, ನಿಗಮದ ಅಧ್ಯಕ್ಷೆ ಚಿತ್ರನಟಿ ಶೃತಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ ಅವರು ಕೆ.ಆರ್.ಎಸ್.ನ ನಡುಗಡ್ಡೆ ದ್ವೀಪ ವೀಕ್ಷಣೆ ಮಾಡಿದರು.
ಇದೇ ವೇಳೆ ವೇಣುಗೋಪಾಲಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಸಚಿವರು, ಪ್ರವಾಸೋದ್ಯಮ ಅಭಿವೃದ್ಧಿ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದರು.
ಜಿಲ್ಲಾಧಿಕಾರಿ ಎಸ್. ಅಶ್ವತಿ, ಜಿಲ್ಲಾ ಪಂಚಾಯತ್ ಸಿಇಓ ದಿವ್ಯಾ ಪ್ರಭು, ಅಪರ ಜಿಲ್ಲಾಧಿಕಾರಿ ವಿ.ಆರ್. ಶೈಲಜಾ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss