Tuesday, September 23, 2025

KRS ಡ್ಯಾಂನ ಟಿಪ್ಪು ಸುಲ್ತಾನ್ ಸಾಗರ ಮಾಡಲು ‘ಕೈ’ ಪ್ಲಾನ್ ಮಾಡ್ತಿದೆ: ಆರ್.ಅಶೋಕ್ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಆರ್‌ಎಸ್ ಡ್ಯಾಂಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಟಿಪ್ಪು ಸುಲ್ತಾನ್ ಸಾಗರ ಎಂದು ಮರುನಾಮಕರಣ ಮಾಡಲು ಹುನ್ನಾರ ನಡೆಸುತ್ತಿದೆ ಎಂದು ವಿರೋಧ ಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಮೈಸೂರು ರಾಜ ಮನೆತನಕ್ಕೆ ಕಳಂಕ ತರುವಂತಹ ಹೇಳಿಕೆಗಳನ್ನು ನೀಡುತ್ತಿದ್ದು, ಈಗ ಕೆಆರ್‌ಎಸ್ ಇತಿಹಾಸಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಹೆಚ್.ಸಿ.ಮಹದೇವಪ್ಪ ಅವರು ಕಾಣದ ಶಿಲಾನ್ಯಾಸವನ್ನು ಇಟ್ಟುಕೊಂಡು ಕೆಆರ್‌ಎಸ್‌ನ ಹೆಸರು ಬದಲಿಸಲು ಪೀಠಿಕೆ ಹಾಕಿದ್ದಾರೆ. ಕೆಆರ್‌ಎಸ್ ಹೆಸರು ಬದಲಿಸಲು ಯಾರದೋ ಕೈವಾಡವಿದ್ದು, ಹುನ್ನಾರವೆಸಗುತ್ತಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ