Man of the match ಟೈಟಲ್ ಗೆದ್ದು ಐಪಿಎಲ್‌ನಲ್ಲಿ ದಾಖಲೆ ಬರೆದ ಕೃನಾಲ್‌ ಪಾಂಡ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಆರ್‌ಸಿಬಿ ಆಲ್‌ರೌಂಡರ್‌ ಕೃನಾಲ್‌ ಪಾಂಡ್ಯ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆಯುವ ಮೂಲಕ ಐಪಿಎಲ್‌ನಲ್ಲಿ ವಿಶೇಷ ದಾಖಲೆ ಬರೆದಿದ್ದಾರೆ.

ಎರಡು ಫೈನಲ್‌ನಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೆ ಕೃನಾಲ್‌ ಪಾತ್ರವಾಗಿದ್ದಾರೆ. 2017ರಲ್ಲಿ ಪುಣೆ ಸೂಪರ್‌ ಜೈಂಟ್ಸ್‌ ವಿರುದ್ಧ ಮುಂಬೈ ತಂಡ ಫೈನಲ್‌ನಲ್ಲಿ ಗೆದ್ದಾಗಲೂ ಕೃನಾಲ್‌ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರವಾಗಿದ್ದರು.

ಮೊದಲು ಬ್ಯಾಟ್‌ ಮಾಡಿದ್ದ ಮುಂಬೈ 8 ವಿಕೆಟ್‌ ನಷ್ಟಕ್ಕೆ 129 ರನ್‌ ಹೊಡೆದಿತ್ತು. ಈ ಪಂದ್ಯದಲ್ಲಿ ಕೃನಾಲ್‌ 47 ರನ್‌(38 ಎಸೆತ, 3 ಬೌಂಡರಿ, 2 ಸಿಕ್ಸ್‌) ಹೊಡೆದಿದ್ದರು. ಈ ಪಂದ್ಯವನ್ನು ಮುಂಬೈ ರೋಚಕ 1 ರನ್‌ಗಳಿಂದ ಗೆದ್ದುಕೊಂಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!