BIG NEWS | ಬಿಜೆಪಿಯಿಂದ ಕೆ ಎಸ್‌ ಈಶ್ವರಪ್ಪ ಉಚ್ಛಾಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಬಿಜೆಪಿ ಶಿಸ್ತು ಸಮಿತಿ ಈ ನಿರ್ಧಾರ ಕೈಗೊಂಡಿದೆ.

ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ.ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ.ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು (6) ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಆದೇಶ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!