ಹೊಸ ದಿಗಂತ ವರದಿ, ಮಂಗಳೂರು:
ಕೆಎಸ್ಆರ್ ಟಿಸಿ ಬಸ್ ಚಾಲಕರೊಬ್ಬರನ್ನು ತಡೆದು ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸೆ ಆರೋಪಿಯೊಬ್ಬನನ್ನು
ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ತಾಲೂಕಿನ ಅಡ್ಯಾರ್ ಕುಂಡಾಲ ನಿವಾಸಿ ಸೊಹೀಫ್ (19) ಬಂಧಿತ.
ಈತ ಪುತ್ತೂರು ಡಿಪೊವಿನ ಕೆಎಸ್ಆರ್.ಟಿಸಿ ಬಸ್ ಚಾಲಕ ರಾಜು ಗಜಕೋಶ ಎಂಬವರಿಗೆ ಜೀವ ಬೆದರಿಕೆ ಒಡ್ಡಿದ್ದ ಎಂದು ಆರೋಪಿಸಲಾಗಿದೆ.
ಶುಕ್ರವಾರ ಬೆಳಗ್ಗೆ ಪುತ್ತೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ ನ್ನು ಕಣ್ಣೂರು ಬಳಿ ತಡೆದು
ವರು ಚಾಲಕನಿಗೆ ಚಾಕು ತೋರಿಸಿ ಬೆದರಿಕೆ ಒಡ್ಡಿದ್ದು, ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.