ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಉತ್ತರ ತಾಲೂಕಿನ ಮಾದವಾರ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಪ್ರಯಾಣಿಕರಿದ್ದ ಕೆಎಸ್‌ಆರ್‌ಟಿಸಿ ಬಸ್ ಅಪಘಾತಕ್ಕೀಡಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿದ್ದು, ಬಸ್‌ನಲ್ಲಿ ಮುಂದೆ ಕುಳಿತಿದ್ದ ಮಹಿಳೆಗೆ ಗಾಯಗಳಾಗಿವೆ. ಡಿವೈಡರ್‌ಗೆ ಬಸ್ ಡಿಕ್ಕಿಯಾಗಿ ರಸ್ತೆ ಮಧ್ಯೆ ನಿಂತಿದ್ದ ಕಾರಣ ಟ್ರಾಫಿಕ್ ಜಾಮ್ ಉಂಟಾಗಿತ್ತು. ನಂತರ ಪೊಲೀಸರು ಕ್ರೇನ್ ಮೂಲಕ ಬಸ್ ತೆರವುಗೊಳಿಸಿದರು.
ಲಾರಿ ಓವರ್‌ಟೇಕ್ ಮಾಡಲು ಹೋಗಿ ಅಪಘಾತವಾಗಿದೆ, ದೇವರ ದಯೆ ಯಾರ ಪ್ರಾಣವೂ ಹೋಗಿಲ್ಲ ಎಂದು ಪ್ರಯಾಣಿಕರು ನಿಟ್ಟುಸಿರುಬಿಟ್ಟಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.