ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ಖಾಲಿ ಇರುವ 8 ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್‌ಲೈನ್ ಮೂಲಕ ಜನವರಿ 31,2023ರೊಳಗೆ ಅರ್ಜಿಯನ್ನು ಹಾಕಬಹುದು.
ಶೀಘ್ರಲಿಪಿಗಾರ ಹುದ್ದೆಗಳಿಗೆ 10ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,350/- ರಿಂದ 58,250/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿದಾರರು 150/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ವಿಳಾಸಕ್ಕೆ ಜನವರಿ 31,2023ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ :
Registrar, K.S.A.T, 7th Floor, Kandaya Bhavana, K.G. Road, Bengaluru-560009.