RECRUITMENT | ಕರ್ನಾಟಕದ ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ 8 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಕಂಪ್ಯೂಟರ್‌ ಪ್ರೋಗ್ರಾಮರ್‌, ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕ ಮತ್ತು ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಬಿ.ಟೆಕ್‌, ಎಂಸಿಎ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 16,000/- ರಿಂದ 30,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಮಾರ್ಚ್‌ 6,2023ರೊಳಗೆ ಅರ್ಜಿಯನ್ನು ಹಾಕಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!