Thursday, July 7, 2022

Latest Posts

ಕೆ-ಸೆಟ್ ಪರೀಕ್ಷೆ ಮುಂದೂಡಿಕೆ: ದಿನಾಂಕ ಶೀಘ್ರ ಪ್ರಕಟ

ಹೊಸದಿಗಂತ ವರದಿ, ಶಂಕರಘಟ್ಟ:

ಏಪ್ರಿಲ್ 11ರಂದು ನಿಗದಿಯಾಗಿದ್ದ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯನ್ನು ಮುಂದೂಡಲಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಕೆ-ಸೆಟ್ ಪರೀಕ್ಷಾ ಸಂಯೋಜನಾಧಿಕಾರಿ ಪ್ರೊ. ಎಚ್. ರಾಜಶೇಖರ್ ತಿಳಿಸಿರುವುದಾಗಿ ಕುವೆಂಪು ವಿವಿ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ಕುವೆಂಪು ವಿಶ್ವವಿದ್ಯಾಲಯಕ್ಕೆ ಮಾಹಿತಿ ನೀಡಿರುವ ಅವರು ಕೆ-ಸೆಟ್ ಪರೀಕ್ಷೆಗೆ ರಾಜ್ಯಾದ್ಯಂತ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ಕಾರಣಾಂತರಗಳಿಂದ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ.

ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲೇ ಕೆ-ಸೆಟ್ ವೆಬ್‌ಸೈಟ್‌ ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ನೊಂದಾಯಿತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗೆ ಮತ್ತು ಮುಂದಿನ ಪರೀಕ್ಷಾ ದಿನಾಂಕದ ಬಗ್ಗೆ ತಿಳಿದುಕೊಳ್ಳಲು ಕೆ-ಸೆಟ್ ವೆಬ್ ಸೈಟ್ ಗಮನಿಸುತ್ತಿರುವಂತೆ ಕೋರಲಾಗಿದೆ‌.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss