ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು (ಕೆ-ಸೆಟ್) ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲು ಸರ್ಕಾರ ನಿರ್ದೇಶನ ನೀಡಿದೆ. ಅದರ ಅನ್ವಯ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಅರ್ಜಿ ಸಲ್ಲಿಸಲು ಅರ್ಹತೆ:
ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಶೇ 55%ರಷ್ಟು ಅಂಕ ಗಳಿಸಿರಬೇಕು. ಪರಿಶಿಷ್ಟ ಜಾತಿ, ಪಂಗಡ, ವಿವಿಧ ಹಿಂದುಳಿದ ವರ್ಗ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶೇ 50%ರಷ್ಟು ಅಂಕ ನಿಗದಿಪಡಿಸಲಾಗಿದೆ.
ವಯೋಮಿತಿ:
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ತೆಗೆದುಕೊಳ್ಳಲು ಗರಿಷ್ಟ ವಯೋಮಿತಿ ಇರುವುದಿಲ್ಲ.
ಪರೀಕ್ಷಾ ವಿಧಾನ:
ಕೆಎಸ್‌ಇಟಿ ಪರೀಕ್ಷೆಯಲ್ಲಿ ಎರಡು ಪ್ರಶ್ನೆಪತ್ರಿಕೆಗಳಿರುತ್ತವೆ. ಎರಡು ಪತ್ರಿಕೆಗಳು ಸಹ ಬಹುಸಂಖ್ಯಾ ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತವೆ. ಮೊದಲನೇ ಪತ್ರಿಕೆ- ಒಟ್ಟು 100 ಅಂಕಗಳು- ಒಂದು ಗಂಟೆ ಅವಧಿ ಎರಡನೇ ಪತ್ರಿಕೆ- ಒಟ್ಟು 200 ಅಂಕಗಳು- 2 ಗಂಟೆ ಅವಧಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಸೆಪ್ಟೆಂಬರ್ 10,2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 30,2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಅಕ್ಟೋಬರ್ 3,2023
ಪರೀಕ್ಷಾ ದಿನಾಂಕ: ನವೆಂಬರ್ 5,2023