ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯನ್ನು (ಕೆ-ಸೆಟ್) ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.
ನವೆಂಬರ್ 26ರಂದು ಪರೀಕ್ಷೆಯನ್ನು ನಿಗದಿಪಡಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಈ ಪರೀಕ್ಷೆಯನ್ನು ಮುಂದೂಡಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೆ-ಸೆಟ್ ಪರೀಕ್ಷೆಯನ್ನು ನಡೆಸುತ್ತದೆ. ಈ ಪರೀಕ್ಷೆಯನ್ನು ಡಿ 31ರಂದು ನಡೆಸಲು ತಾತ್ಕಾಲಿಕ ದಿನಾಂಕವನ್ನು ನಿಗದಿ ಮಾಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.