ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ 41 ಹುದ್ದೆಗಳ ನೇಮಕಾತಿ : ತಿಂಗಳಿಗೆ 52 ಸಾವಿರ ವೇತನ !

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ವಿವಿಧ ವಿಶೇಷತೆಯ 41 ಉಪ ವ್ಯವಸ್ಥಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗಧಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳಿಗೆ ಅನುಗುಣವಾಗಿ ಬಿಇ / ಕಾನೂನು ಪದವಿ / ಎಂಬಿಎ ಅಥವಾ ಎಂ.ಕಾಂ / ಎಸಿಎ/ ICWA ವಿದ್ಯಾರ್ಹತೆಯನ್ನು ಕನಿಷ್ಠ 70 ಅಂಕಗಳೊಂದಿಗೆ ಸಾಮಾನ್ಯ / ಒಬಿಸಿ ಅಭ್ಯರ್ಥಿಗಳು, ಇತರೆ ಅಭ್ಯರ್ಥಿಗಳು ಕನಿಷ್ಠ 60 ಶೇಕಡ ಅಂಕಗಳೊಂದಿಗೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಕನಿಷ್ಠ 25 ವರ್ಷ ರಿಂದ ಗರಿಷ್ಠ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ಮೀರಿರಬಾರದು.

ಉಪ ವ್ಯವಸ್ಥಾಪಕರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 52,650/- ರಿಂದ 97,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿದಾರರು 2000 ರೂ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳು 1500 ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್‌ 18,2023ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ :
ವ್ಯವಸ್ಥಾಪಕ ನಿರ್ದೇಶಕರು, ಕೆಎಸ್‌ಎಫ್‌ಸಿ ಭವನ, # 1/1, ತಿಮ್ಮಯ್ಯ ರಸ್ತೆ, ದಂಡು ರೈಲ್ವೆ ನಿಲ್ದಾಣದ ಬಳಿ, ಬೆಂಗಳೂರು – 560052.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!