ಕೆಎಸ್‌ಆರ್ ಟಿಸಿ ಬಸ್ ಡಿಕ್ಕಿ: ಎಂಬಿಬಿಎಸ್ ವಿದ್ಯಾರ್ಥಿ ಸಾವು

ಹೊಸದಿಗಂತ ವರದಿ,ಮೈಸೂರು:

ಕೆಎಸ್‌ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಮೈಸೂರಿನ ಶಾಂತಲಾ ಸಿಗ್ನಲ್ ಬಳಿ ನಡೆದಿದೆ. ಬೆಳಗಾವಿಯ ಘಟಪ್ರಭಾದ ನಿವಾಸಿ ಎಲ್.ಎಚ್. ರಾಹುಲ್ ಮೃತಪಟ್ಟ ವಿದ್ಯಾರ್ಥಿ. ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದ ಈತ ಶಾಂತಲಾ ಸಿಗ್ನಲ್ ದಾಟುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಸ್ ಡಿಕ್ಕಿಯಾದ ದೃಶ್ಯ ವೃತ್ತದಲ್ಲಿ ಹಾಕಲಾಗಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಕೆ.ಆರ್. ಸಂಚಾರ ಠಾಣೆಯ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!