November 1, 2026
Sunday, November 1, 2026
spot_img

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: 13 ಮಂದಿ ಪ್ರಯಾಣಿಕರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರಿನಿಂದ ಸಾಗರಕ್ಕೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಆಕ್ಸಲ್ ಬ್ಲೇಡ್ ಹಠಾತ್ತನೆ ತುಂಡಾಗಿ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಪಟ್ ಕಲ್ಯಾಣ ಮಂಟಪದ ಬಳಿ ನಡೆದಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಡೆದಿದ್ದೇನು?

ಈ ಕೆಎಸ್‌ಆರ್‌ಟಿಸಿ ಬಸ್ ಎಂದಿನಂತೆ ಬೆಂಗಳೂರಿನಿಂದ ಸಾಗರ ಪಟ್ಟಣದ ಕಡೆಗೆ ಬರುತ್ತಿತ್ತು. ಸಾಗರ ನಗರದ ಬಾಪಟ್ ಕಲ್ಯಾಣ ಮಂಟಪದ ಸಮೀಪ ಬರುತ್ತಿದ್ದಂತೆಯೇ ಬಸ್‌ನ ಆಕ್ಸಲ್ ಬ್ಲೇಡ್ ಕಟ್ ಆಗಿದೆ. ಇದರಿಂದಾಗಿ ಚಾಲಕನಿಗೆ ಬಸ್ ಅನ್ನು ನಿಯಂತ್ರಿಸಲು ಸಾಧ್ಯವಾಗದೆ ರಸ್ತೆಯಲ್ಲೇ ಪಲ್ಟಿಯಾಗಿದೆ. ಅಪಘಾತದ ಸಮಯದಲ್ಲಿ ಬಸ್‌ನಲ್ಲಿ ಒಟ್ಟು 41 ಜನ ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ:

13 ಜನರಿಗೆ ಗಾಯ

ಬಸ್ ಪಲ್ಟಿಯಾದ ರಭಸಕ್ಕೆ ಬಸ್‌ನಲ್ಲಿದ್ದ ಚಾಲಕ, ಕಂಡಕ್ಟರ್ ಸೇರಿದಂತೆ ಒಟ್ಟು 13 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳೀಯರು ತಕ್ಷಣವೇ ನೆರವಿಗೆ ಧಾವಿಸಿದ್ದು, ಗಾಯಾಳುಗಳನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಗಾಯಗೊಂಡಿರುವ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Must Read

Skip to toolbar