ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: 13 ಮಂದಿ ಪ್ರಯಾಣಿಕರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಬೆಂಗಳೂರಿನಿಂದ ಸಾಗರಕ್ಕೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಆಕ್ಸಲ್ ಬ್ಲೇಡ್ ಹಠಾತ್ತನೆ ತುಂಡಾಗಿ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಪಟ್ ಕಲ್ಯಾಣ ಮಂಟಪದ ಬಳಿ ನಡೆದಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಡೆದಿದ್ದೇನು? ಈ ಕೆಎಸ್‌ಆರ್‌ಟಿಸಿ ಬಸ್ ಎಂದಿನಂತೆ ಬೆಂಗಳೂರಿನಿಂದ ಸಾಗರ ಪಟ್ಟಣದ ಕಡೆಗೆ ಬರುತ್ತಿತ್ತು. ಸಾಗರ ನಗರದ ಬಾಪಟ್ ಕಲ್ಯಾಣ ಮಂಟಪದ ಸಮೀಪ ಬರುತ್ತಿದ್ದಂತೆಯೇ ಬಸ್‌ನ ಆಕ್ಸಲ್ ಬ್ಲೇಡ್ ಕಟ್ ಆಗಿದೆ. … Continue reading ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: 13 ಮಂದಿ ಪ್ರಯಾಣಿಕರಿಗೆ ಗಾಯ