ಸರ್ಕಾರಕ್ಕೆ ಮುಷ್ಕರದ ಬಿಸಿ: ಬೇಡಿಕೆ ಈಡೇರದ ಹಿನ್ನೆಲೆ ರಾಜ್ಯ ಸಾರಿಗೆ ನೌಕರರ ಧರಣಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ಸರ್ಕಾರಕ್ಕೆ ಮಷ್ಕರದ ಬಿಸಿ ತಟ್ಟಲಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಧರಣಿ ನಡೆಸಲು ಕರೆ ಕೊಟ್ಟಿದ್ದಾರೆ. ಸಾರಿಗೆ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾದ್ದರಿಂದ ಸರ್ಕಾರದ ಧೋರಣೆ ಖಂಡಿಸಿ ಜನವರಿ 24 ರಂದು ರಾಜ್ಯ ಸಾರಿಗೆ ನೌಕರರು ಧರಣಿ ಸತ್ಯಾಗ್ರಹ ನಡೆಸಲು ಮುಂದಾಗಿದ್ದಾರೆ. ಜಂಟಿ ಕ್ರಿಯಾ ಸಮಿತಿ ಬೆಂಗಳೂರಿನ 4 ನಿಗಮದ ವಿಭಾಗೀಯ ಕಚೇರಿ ಮುಂದೆ ಬೃಹತ್ ಧರಣಿ ಸತ್ಯಾಗ್ರಹ ನಡೆಸಲು ನೌಕರರು ಕರೆ ನೀಡಿದ್ದಾರೆ. ಬೆಳಗ್ಗೆ 11ರಿಂದ ಸಂಜೆ 5.30ರವರೆಗೆ ಧರಣಿ ನಡೆಯಲಿದ್ದು, ಬಿಎಂಟಿಸಿ ನೌಕರರು ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.

ವೇತನ ಹೆಚ್ಚಳ, ವಜಾಗೊಂಡ ನೌಕರರನ್ನು ಮರುಸೇರ್ಪಡೆ, ಕೆಲಸದ ಪರಿಸ್ಥಿತಿಗಳನ್ನು ಸುಧಾರಿಸಲು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಎಸ್‌ಆರ್‌ಟಿಸಿ ಮತ್ತು ಎನ್‌ಡಬ್ಲ್ಯುಕೆಎಸ್‌ಆರ್‌ಟಿಸಿ ನಾಲ್ಕು ಸಾರಿಗೆ ನೌಕರರು ಬೀದಿಗಿಳಿಯಲಿದ್ದಾರೆ. ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಂಡಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘ ಹಾಗೂ ಇತರೆ ಸಂಘಗಳು ಬೆಂಬಲ ವ್ಯಕ್ತಪಡಿಸಿವೆ. ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂದು ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿವೆ.

ಸಾರಿಗೆ ನೌಕರರ ಪ್ರತಿಭಟನೆಯಿಂದಾಗಿ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುವವರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಪ್ರಯಾಣಿಕರಿಗೆ ಅವಶ್ಯಕತೆಯಿರುವಷ್ಟು ವ್ಯವಸ್ಥಿತ ಸಾರಿಗೆ ಸೌಲಭ್ಯ ಒದಗಿಸುವ ತೀರ್ಮಾನವಿದೆ. ಸಾರಿಗೆ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ, ಪ್ರಯಾಣಿಕರು ಭಯಪಡಬೇಕಾದ ಅಗತ್ಯ ಇಲ್ಲ ಎಂದು ಸಾರಿಗೆ ಮಂಡಳಿ ಕಾರ್ಯದರ್ಶಿ, ಸಾರ್ವಜನಿಕ ಸಂಪರ್ಕಾಧಿಕಾರಿ ಸ್ಪಷ್ಟಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!