ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ, ಸರ್ಕಾರಿ ನೌಕರರಿಗೆ ನೀಡುತ್ತಿರುವ ವೇತನವನ್ನೇ ಸಾರಿಗೆ ನೌಕರರಿಗೆ ಕೂಡ ನೀಡುವುದಾಗಿ ಭರವಸೆ ನೀಡಿದ್ದರು ಇಲ್ಲಿಯವರೆಗೂ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿಲ್ಲ. ಹೀಗಾಗಿ ಬೇಡಿಕೆಗಳನ್ನು ಈಡೇರಿಸಲು ಮುಂದಾಗದಿದ್ದರೆ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ನೌಕರರು ಮುಷ್ಕರದ ದಿನಾಂಕವನ್ನು ಘೋಷಣೆ ಮಾಡುತ್ತೇವೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಇದೀಗ ಕೆಎಸ್ಆರ್ಟಿಸಿ, ಬಿಎಂಟಿಸಿ ಸಾರಿಗೆ ನೌಕರರು ಕೂಡ ಮುಷ್ಕರದ ಎಚ್ಚರಿಕೆ ನೀಡಿರುವುದರಿಂದ ಸರ್ಕಾರಕ್ಕೆ ಡಬಲ್ ಶಾಕ್ ಎದುರಾಗಿದೆ.
ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ಬುಧವಾರವಷ್ಟೇ ಸಭೆ ನಡೆಸಿ, ಬೇಡಿಕೆಗಳನ್ನು ಈಡೇರಿಸಲು 22 ರ ವರೆಗೆ ಸರ್ಕಾರಕ್ಕೆ ಗಡುವು ನೀಡಿದೆ. ಬೇಡಿಕೆಗಳನ್ನು ಈಡೇರಿಸಲು ಮುಂದಾಗಿಲ್ಲ ಅಂದರೆ 25 ರಂದು ಸಭೆ ಕರೆದು ಖಾಸಗಿ ಸಾರಿಗೆ ಮುಷ್ಕರಕ್ಕೆ ಕರೆ ನೀಡುವ ಎಚ್ಚರಿಕೆ ನೀಡಿದೆ.