Tuesday, January 27, 2026
Tuesday, January 27, 2026
spot_img

KSRTC ಬಸ್-ಬೈಕ್ ಮುಖಾಮುಖಿ ಡಿಕ್ಕಿ: ಮಗುವಿನ ಕಣ್ಣೆದುರೇ ಕೊನೆಯುಸಿರೆಳೆದ ತಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಯಶೋಧರಪುರ ಗೇಟ್ ಬಳಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಾಗಮಂಗಲ ಗ್ರಾಮದ ನಿವಾಸಿ ಜೀವನ್ ಎಂಬುವವರ ಪತ್ನಿ ಅಶ್ವಿನಿ (36) ಮೃತ ದುರ್ದೈವಿ.

ಜೀವನ್ ಅವರು ತಮ್ಮ ಪತ್ನಿ ಅಶ್ವಿನಿ ಹಾಗೂ ಮಗುವಿನೊಂದಿಗೆ ಬೈಕ್‌ನಲ್ಲಿ ಹುಣಸೂರು ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಪಿರಿಯಾಪಟ್ಟಣ ಕಡೆಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಕುಳಿತಿದ್ದ ಅಶ್ವಿನಿ ಅವರು ರಸ್ತೆಗೆ ಬಿದ್ದು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಅಪಘಾತದಲ್ಲಿ ಜೀವನ್ ಹಾಗೂ ಅವರ ಮಗು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಹುಣಸೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !