ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಚಂದ್ರಗಿರಿ ಮಡಲಂ ಬಳಿಯ ಭಾಕರಪೇಟ್ ಘಾಟ್‌ನಲ್ಲಿ ತೆರುಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬ್ರೇಕ್ ಫೈಲ್ಯೂರ್ ಆಗಿ ಬಂಡೆಗೆ ಡಿಕ್ಕಿ ಹೊಡೆದಿದೆ. ಬಸ್ ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ.
ಪ್ರಪಾತವನ್ನು ತಪ್ಪಿಸಿದ ಚಾಲಕ ಬಸ್ ಅನ್ನು ಬೆಟ್ಟದ ಬಂಡೆಗೆ ಗುದ್ದಿಸಿದ್ದಾರೆ. ಬಸ್‌ನಲ್ಲಿದ್ದ 43 ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ತಿರುಪತಿಯ ರೂಯಾ ಆಸ್ಪತ್ರೆಗೆ ರವಾನಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ಮದನಪಲ್ಲಿ ಮಾರ್ಗವಾಗಿ ತಿರುಪತಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.