ದಾವಣಗೆರೆಯಲ್ಲಿ ಓಮಿನಿಗೆ ಕೆಎಸ್‌ಆರ್‌ಟಿಸಿ ಬಸ್​ ಡಿಕ್ಕಿ; ಸ್ಥಳದಲ್ಲೇ ಮೂವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಓಮಿನಿ ವ್ಯಾನ್‌ಗೆ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದಿದ್ದು, ಓಮಿನಿಯಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನ್ಯಾಮತಿ ತಾಲೂಕಿನ ಚಿನ್ನಕಟ್ಟೆ-ಶಿವಪುರ ಬಳಿ ಅಪಘಾತ ಸಂಭವಿಸಿದೆ.
ಸೂರಗೊಂಡನಕೊಪ್ಪ ನಿವಾಸಿಗಳಾದ ರಾಕೇಶ್ (30 ) ದೇವರಾಜ್ ( 27)  ಹರಮಘಟ್ಟ ಗ್ರಾಮದ ನಿವಾಸಿ ವರ್ಷದ ನಂಜುಂಡಪ್ಪ (83) ಮೃತರು.

ಭೀಕರ ಅಪಘಾತದಲ್ಲಿ ಓಮಿನಿಯಲ್ಲಿದ್ದ ಆರಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಈ ಪೈಕಿ ತೀವ್ರವಾಗಿ ಗಾಯಗೊಂಡಿರುವ ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನ್ಯಾಮತಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!