Monday, August 8, 2022

Latest Posts

ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಸವಾರ ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸದಿಗಂತ ವರದಿ,ನಾಗಮಂಗಲ:

ರಸ್ತೆ ತಿರುವು ಪಡೆಯುತ್ತಿದ್ದ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಹಿಂಬದಿಯಿಂದ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಪಟ್ಟಣದ ಚಾಮರಾಜನಗರ ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮುಂಭಾಗ ಭಾನುವಾರ ಸಂಭವಿಸಿದೆ.
ಪಟ್ಟಣದ ವಾಸಿ ಕುಮಾರ್(50) ಮೃತ ವ್ಯಕ್ತಿಯಾಗಿದ್ದು, ಈತ ಟೀ ಕುಡಿದುಕೊಂಡು ರಸ್ತೆ ಕ್ರಾಸ್ ಮಾಡುವ ವೇಳೆ ಹಿಂಭಾಗದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಬೈಕ್ ಸಮೇತ ಬಸ್ ಚಕ್ರಕ್ಕೆ ಸಿಲುಕಿ ಬೈಕ್‌ಸವಾರ ಕುಮಾರ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ, ಬೈಕ್ ಕೂಡ ನಜ್ಜುಗುಜ್ಜಾಗಿದೆ. ಬಸ್ ಚಾಲಕ ಪೋಲಿಸರಿಗೆ ಶರಣಾಗಿದ್ದು, ನಾಗಮಂಗಲ ಪಟ್ಟಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss