ಕ್ಯಾಂಟರ್‌ಗೆ KSRTC ಬಸ್ ಡಿಕ್ಕಿಯಾಗಿ ಭೀಕರ ಅಪಘಾತ: 20ಕ್ಕೂ ಹೆಚ್ಚು ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಗಡಿಯ ಸೋಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಂಕ್ಚರ್ ಆಗಿ ನಿಂತಿದ್ದ ಕ್ಯಾಂಟರ್‌ಗೆ ಕೆಎಸ್‍ಆರ್‌ಟಿಸಿ ಬಸ್ ಡಿಕ್ಕಿಯಾಗಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ.

ಬಸ್‍ನಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬಸ್ ನಜ್ಜುಗುಜ್ಜಾಗಿದ್ದು, ಸ್ಥಳೀಯರು ಜೆಸಿಬಿ ಬಳಸಿ ಚಾಲಕನನ್ನು ರಕ್ಷಿಸಿದ್ದಾರೆ.

ಕ್ಯಾಂಟರ್ ಪಂಕ್ಚರ್ ಆಗಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿತ್ತು. ಇದನ್ನು ಗಮನಿಸದೇ ಚಾಲಕ ಬಸ್ ಚಲಾಯಿಸಿಕೊಂಡು ಬಂದ ಪರಿಣಾಮ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಸೋಲೂರು ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!