ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಮರಾಜನಗರ ಜಿಲ್ಲೆಯ ಬಸವಟ್ಟಿ ಗೇಟ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ನಡೆದಿದೆ.
ಕಿಶೋರ್ (48) ಮತ್ತು ಮಹೇಶ್ (40) ಮೃತಪಟ್ಟವರು. ಘಟನೆ ನಡೆದ ಸ್ಥಳಕ್ಕೆ ಸಂತೇಮರಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಂತೇಮರಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.