ಕಲ್ಲು ತುಂಬಿದ ಲಾರಿಗೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್: ದಂಪತಿ ಸಾವು, ಮಗು ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಎಸ್‌ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ದಂಪತಿ ಮೃತಪಟ್ಟಿದ್ದಾರೆ.

ಹೊಸಕೋಟೆಯ ಮೈಲಾಪುರ ಗೇಟ್ ಬಳಿ ಅಪಘಾತ ಸಂಭವಿಸಿದ್ದು, ಬಸ್‌ನಲ್ಲಿದ್ದ 20  ಪ್ರಯಾಣಿಕರಿಗೆ ಗಾಯಗಳಾಗಿವೆ. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಲ್ಲು ತುಂಬಿದ್ದ ಲಾರಿಗೆ ಬಸ್ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ.
ಚಿತ್ತೂರು ಮೂಲದ ಬಾಲಮುರುಗನ್ ಹಾಗೂ ಸೆಲ್ವಿ ಮೃತಪಟ್ಟಿದ್ದಾರೆ. ಅವರ ನಾಲ್ಕು ವರ್ಷದ ಮಗು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ನಂತರ ಚಾಲಕ ಪರಾರಿಯಾಗಿದ್ದಾನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!