ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಕುಂದನಹಳ್ಳಿ ಗೇಟ್ ನಲ್ಲಿ ಮರಕ್ಕೆ ಕೆಎಸ್’ಆರ್ ಟಿಸಿ ಬಸ್ ಡಿಕ್ಕಿಯಾಗಿ 20 ಮಂದಿಗೆ ಗಾಯಗಳಾಗಿದ್ದು, ಐವರ ಸ್ಥಿತಿ ಚಿಂತಾಜನಕವಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಗಾಯಗೊಂಡ ಪ್ರಯಾಣಿಕರನ್ನು ಕೆ ಆರ್ ಪೇಟೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಸ್ ನಲ್ಲಿ 25 ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ, ಅದರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.