ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಗ್ರಾಮದಲ್ಲಿ ನಡೆದಿದೆ.
ಕೊಳ್ಳೆಗಾಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ಸೊಂದು ರುದ್ರಾಕ್ಷಿಪುರ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ. 30ಕ್ಕೂ ಹೆಚ್ಚು ಬಸ್ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಮದ್ದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.