October 17, 2026
Saturday, October 17, 2026
spot_img

ಟೈರ್ ಸ್ಫೋಟಕ್ಕೆ ಪಲ್ಟಿಯಾದ ಕೆಎಸ್‌ಆರ್‌ಟಿಸಿ ಬಸ್: ಇಬ್ಬರ ದುರ್ಮ*ರಣ, 67 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿನತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಬಳಿ ಭೀಕರ ಅಪಘಾತಕ್ಕೀಡಾಗಿದೆ. ಬಸ್‌ನ ಮುಂಭಾಗದ ಟೈರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ.

ಅಪಘಾತದಲ್ಲಿ ಕೊಳ್ಳೇಗಾಲದ ಪುಟ್ಟನಂಜಮ್ಮ (60) ಹಾಗೂ ಕುದೇರು ನಿವಾಸಿ ಮಹೇಶ್ (50) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ:

ಬಸ್‌ನಲ್ಲಿದ್ದ 67 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಎಲ್ಲರನ್ನೂ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ 10ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿರುವುದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಹುಣ್ಣಿಮೆಯ ಹಿನ್ನೆಲೆಯಲ್ಲಿ ಮಾದಪ್ಪನ ದರ್ಶನ ಮುಗಿಸಿ ಮರಳುತ್ತಿದ್ದ ಭಕ್ತರೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಮಾಹಿತಿ ತಿಳಿದ ತಕ್ಷಣ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಅಪಘಾತದ ನಿಖರ ಕಾರಣದ ಕುರಿತು ತನಿಖೆ ಆರಂಭಿಸಿದ್ದಾರೆ.

Must Read