ಉರಿಬಿಸಿಲಿನಲ್ಲಿ ಪಲ್ಟಿಯಾಗಿ ಬಿದ್ದ ಕೆಎಸ್‌ಆರ್‌ಟಿಸಿ ಬಸ್‌: 40 ಪ್ರಯಾಣಿಕರು ಅದೃಷ್ಟವಶಾತ್‌ ಬಚಾವ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ತುಮೂಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಳ್ಳಿಪಾಳ್ಯದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾಗಿದೆ. ಬಸ್‌ನಲ್ಲಿ 40ಕ್ಕೂ ಹೆಚ್ಚು ಜನರು ಇದ್ದರು. ಅವರೆಲ್ಲರೂ ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಐದು ಮಂದಿ ಮಾತ್ರ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಾಲಕ ಇನ್ನಷ್ಟು ಸ್ಪೀಡ್‌ನಲ್ಲಿದ್ದಿದ್ದರೆ ಈ ಅಪಘಾತ ಭೀಕರ ದುರಂತವಾಗಿ ಬದಲಾಗುತ್ತಿತ್ತು. ತಿಪಟೂರು ಡಿಪೋಗೆ ಸೇರಿದ ಬಸ್‌ ಇದಾಗಿದ್ದು, ಹೊಸದುರ್ಗದಿಂದ ಬೆಂಗಳೂರಿಗೆ ಹೋಗುತ್ತಿತ್ತು. ಬಿಸಿಲಿಗೆ ಬಸ್‌ನಲ್ಲಿದ್ದ ಜನ ಹೈರಾಣಾಗಿದ್ದರು. ಗುಬ್ಬಿ ಸಮೀಪದ ಕಳ್ಳಿಪಾಳ್ಯ … Continue reading ಉರಿಬಿಸಿಲಿನಲ್ಲಿ ಪಲ್ಟಿಯಾಗಿ ಬಿದ್ದ ಕೆಎಸ್‌ಆರ್‌ಟಿಸಿ ಬಸ್‌: 40 ಪ್ರಯಾಣಿಕರು ಅದೃಷ್ಟವಶಾತ್‌ ಬಚಾವ್‌