ಹೊಸದಿಗಂತ ವರದಿ ಹಾಸನ :
ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಮನೆಗೆ ನುಗ್ಗಿದ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಅಗ್ಗುಂದ ಗ್ರಾಮದಲ್ಲಿ ನಡೆದಿದೆ.
ಅರಸೀಕೆರೆಯಿಂದ ಹುಳಿಯಾರಿಗೆ ತೆರಳುತ್ತಿದ್ದ ಸಾರಿಗೆ ಬಸ್, ಚಾಲಕನ ನಿಂಯತ್ರಣ ಸಿಗದೆ ಮನೆಗೆ ನುಗ್ಗಿದೆ. ಬಸ್‌ನಲ್ಲಿದ್ದ ನಾಲ್ಕೈದು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಅರಸೀಕೆರೆಯ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ನೀಡಲಾಗುತ್ತಿದೆ.
ಬಸ್ ಗುದ್ದಿದ ರಭಸಕ್ಕೆ ಮನೆಯ ಗೋಡೆ ಹಾಗೂ ಕಾಂಪೌಂಡ್ ನೆಲಕ್ಕುರುಳಿದೆ. ಬಸ್ ಹಾಗೂ ವಾಸದ ಮನೆಗೆ ಹಾನಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.