ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆ ಎಸ್ ಆರ್ ಟಿಸಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣಕ್ಕೆ ನೀಡಿದ ಟಿಕೆಟ್ ದರವನ್ನು ಸರ್ಕಾರ ಈವರೆಗೆ ಪಾವತಿಸಿಲ್ಲ. ಈ ಎಲ್ಲಾ ಕಾರಣಗಳಿಂದ ಕೆ ಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುತ್ತಿದೆ.ಇದಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಕೆಯಾಗಿದೆ ಎನ್ನಲಾಗಿತ್ತು.
ಆದ್ರೇ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುತ್ತಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೆ ಎಸ್ ಆರ್ ಟಿ ಸಹಿತ ನಾಲ್ಕು ನಿಗಮಗಳಿಂದ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಸಂಬಂಧ ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂದರು.
ಕೆ ಎಸ್ ಆರ್ ಟಿಸಿ ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಶ್ರೀನಿವಾಸ್ ಕೆ ಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗುವುದು ಅಂತ ಹೇಳಿದ್ದಾರೆ. ಆದ್ರೇ ರಾಜ್ಯ ಸರ್ಕಾರಕ್ಕೆ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಯಾವುದೇ ಪ್ರಸ್ತಾವನೆ ಸಲ್ಲಿಕೆ ಮಾಡಿಲ್ಲ ಎಂದು ತಿಳಿಸಿದರು.