ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

KSRTC ಬಸ್ ಸಂಚಾರ ಆರಂಭ: ಪಾಸ್ ಹೊಂದಿದವರಿಗೆ ಇಲಾಖೆಯಿಂದ ಇದೆ ಮುಖ್ಯ ಮಾಹಿತಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದಿನಿಂದ ಕೆಎಸ್‌ಆರ್ಟಿಸಿ ಬಸ್ ಸಂಚಾರ ಆರಂಭವಾಗಿದ್ದು, ಈ ವೇಳೆ ಏಪ್ರಿಲ್ ತಿಂಗಳ ಮಾಸಿಕ ಪಾಸ್ ಅವಧಿಯನ್ನು ವಿಸ್ತರಿಸಲಾಗಿದೆ.
ಏಪ್ರಿಲ್ ತಿಂಗಳಲ್ಲಿ ಸಾರಿಗೆ ನೌಕರರು 15 ದಿನ ಮುಷ್ಕರ ನಡೆಸಿದ್ದು, ಸೋಂಕು ನಿಯಂತ್ರಣಕ್ಕೆ ರಾಜ್ಯದಲ್ಲಿ ಲಾಕ್ಡೌನ್ ಜಾರಿ ಮಾಡಲಾಗಿತ್ತು. ಇದರಿಂದ ಬಸ್ ಸಂಚಾರ ಸ್ಥಗಿತಗೊಂಡು ಪಾಸ್ ಹೊಂದಿದ್ದ ಪ್ರಯಾಣಿಕರಿಗೆ ಬಳಕೆಗೆ ಅವಕಾಶ ಇರಲಿಲ್ಲ. ಈಗ ಲಾಕ್ಡೌನ್ ತೆರವಾಗಿ ಬಸ್ ಸಂಚಾರ ಆರಂಭವಾಗಿದ್ದು, ಅವಧಿ ಮುಗಿದ ಬಸ್ ಪಾಸ್ ಗಳಿಗೆ ಜುಲೈ 8 ರವರೆಗೆ ಅವಕಾಶ ನೀಡಲಾಗಿದೆ.
ಏಪ್ರಿಲ್ ತಿಂಗಳಲ್ಲಿ ಬಸ್ ಪಾಸ್ ಬಳಸಲು ಸಾಧ್ಯವಾಗದವರು ಜುಲೈ 8 ರವರೆಗೆ ಬಳಸಬಹುದು. ಏಪ್ರಿಲ್ 8 ರಿಂದ 27ರ ಅವಧಿಯಲ್ಲಿ ಮಾಸಿಕ ಪಾಸ್ ಗಳನ್ನು ಪಡೆದಿದ್ದಲ್ಲಿ ಅಂತಹ ಪ್ರಯಾಣಿಕರಿಗೆ ದಿನಾಂಕಗಳನ್ನು ಸೂಕ್ತವಾಗಿ ಪರಿಶೀಲಿಸಿ ಅಷ್ಟು ದಿನಗಳಿಗೆ ಅನುಗುಣವಾಗಿ ವಿಸ್ತರಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಪಾಸ್ ಹೊಂದಿದವರು ಪಾಸ್ ವಿತರಣೆಯ ಕೌಂಟರ್ ನಲ್ಲಿ ಚಾಲ್ತಿ ಅವಧಿಯ ದಿನಗಳಿಗೆ ವಿಸ್ತರಣೆಯಾಗಿರುವ ಬಗ್ಗೆ ವಿಸ್ತರಣೆ ದಿನಾಂಕ, ಸಹಿ ಮತ್ತು ಮೊಹರು ಹಾಕಿಸಿಕೊಳ್ಳಬೇಕೆಂದು ಕೆಎಸ್‌ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss