ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹಾವೇರಿ ಜಿಲ್ಲೆಯ ಹಾನಗಲ್-ವಿಶಾಲಗಡ್ ಮಾರ್ಗದ ಸಾರಿಗೆ ಬಸ್ನಲ್ಲಿ ಕರ್ತವ್ಯದಲ್ಲಿದ್ದ ಡ್ರೈವರ್ ಕಂ ಕಂಡಕ್ಟರ್ ಮಾರ್ಗ ಮಧ್ಯದಲ್ಲಿ ಬಸ್ ನಿಲ್ಲಿಸಿ ನಮಾಜ್ ಮಾಡಿದ ಘಟನೆ ನಡೆದಿದೆ
ಈ ನಮಾಜ್ ಮಾಡುವ ದೃಶ್ಯವನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು, ಭಾರೀ ವೈರಲ್ ಆಗುತ್ತಿದೆ. ಜೊತೆಗೆ, ಸರ್ಕಾರಿ ಕೆಲಸದ ಅವಧಿಯಲ್ಲಿ ಹತ್ತಾರು ಪ್ರಯಾಣಿಕರನ್ನು ಬಸ್ನಲ್ಲಿ ಕೂರಿಸಿ ನಮಾಜ್ ಮಾಡಿದ ಡ್ರೈವರ್ನ ನಡೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಆತನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲೆಯ ಜನರು ಆಗ್ರಹಿಸಿದ್ದಾರೆ.
ಸಾರ್ವಜನಿಕರಿಗೆ ಸೇವೆ ನೀಡುವ ಸರ್ಕಾರಿ ಸಂಸ್ಥೆಯ ಬಸ್ನಲ್ಲಿ ಕರ್ತವ್ಯದ ವೇಳೆ ಈ ರೀತಿಯ ಧಾರ್ಮಿಕ ಚಟುವಟಿಕೆಯನ್ನು ಮಾಡುವುದು ಸರಿಯಾದ ಚಟುವಟಿಕೆ ಅಲ್ಲ ಎಂಬ ಅಭಿಪ್ರಾಯವನ್ನು ಹಲವರು ವ್ಯಕ್ತಪಡಿಸಿದ್ದಾರೆ. ಕೆಲವರು ಇದು ಸಾರ್ವಜನಿಕ ಸೇವೆಯ ದುರಪಯೋಗವೆಂದು ನಿಂದಿಸಿದ್ದಾರೆ. ಇದಲ್ಲದೆ, ಬಸ್ ಸಕಾಲದಲ್ಲಿ ತಲುಪದೇ ವಿಳಂಬವಾಗಿರುವ ಬಗ್ಗೆ ಸಹ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.