ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೊಬೈಲ್ನಲ್ಲಿ ರೀಲ್ಸ್ ನೋಡುತ್ತಾ ಬಸ್ ಚಾಲನೆ ಮಾಡಿದ ಚಾಲಕನನ್ನು ಅಮಾನತು ಮಾಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಕೋಲಾರ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಾಥ್ ಆದೇಶ ಹೊರಡಿಸಿದ್ದಾರೆ.
ಶ್ರೀನಿವಾಸ್ ಅಮಾನತ್ತಾದ ಸರ್ಕಾರಿ ಬಸ್ ಚಾಲಕ. ಸಾಮಾಜಿಕ ಜಾಲತಾಣಗಳು ಹಾಗೂ ಸುದ್ದಿಗಳಲ್ಲಿ ವಿಡಿಯೋ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಹಿರಿಯ ಅಧಿಕಾರಿಗಳು ಚಾಲಕ ಶ್ರೀನಿವಾಸ್ರನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.
ಕೋಲಾರ ವಿಭಾಗದ ಕೋಲಾರ-ಪಾವಗಡ ಮಾರ್ಗದ ಬಸ್ ಚಾಲಕ ಬಸ್ ಚಾಲನೆ ಮಾಡುತ್ತಲೇ ಮೊಬೈಲ್ನಲ್ಲಿ ರೀಲ್ಸ್ ನೋಡುತ್ತಿದ್ದರು. ಚಾಲಕ್ ಶ್ರೀನಿವಾಸ್ ರೀಲ್ಸ್ ನೋಡುತ್ತಿದ್ದನ್ನು ವಿಡಿಯೋ ಮಾಡಿ ಪ್ರಯಾಣಿಕರು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು.