Sunday, April 18, 2021

Latest Posts

ಕೆಎಸ್ಆರ್ ಟಿಸಿ ನೌಕರರ ಮುಷ್ಕರ: ಸೆಕ್ಷನ್ 144 ನಿಷೇಧಾಜ್ಞೆ ಜಾರಿ

ಹೊಸ ದಿಗಂತ ವರದಿ, ಚಿಕ್ಕಮಗಳೂರು:

ಕೆಎಸ್ ಆರ್ ಟಿಸಿ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ.
ಮುಷ್ಕರದ ಅವಧಿಯಲ್ಲಿ ನಿಗಮದ ಆಸ್ತಿ-ಪಾಸ್ತಿ ಮತ್ತು ವಾಹನಗಳಿಗೆ ಹಾನಿಯುಂಟಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಸಾರ್ವಜನಿಕರು ಅಥವಾ ಪ್ರಯಾಣಿಕರಿಗೆ ಅನಾನೂಕೂಲ ಉಂಟಾಗದಂತೆ ಮತ್ತು ಪರ್ಯಾಯ ವ್ಯವಸ್ಥೆಯನ್ನು ಮಾಡುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಕೋರಿಕೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ಏಪ್ರಿಲ್ 7 ರಂದು ಬೆಳಗ್ಗೆ 6 ಗಂಟೆಯಿಂದ ಮುಂದಿನ ಆದೇಶದವರೆಗೂ ಚಿಕ್ಕಮಗಳೂರು, ಮೂಡಿಗೆರೆ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ, ತರೀಕೆರೆ, ಕಡೂರು, ಅಜ್ಜಂಪುರ, ಬಸ್ ನಿಲ್ದಾಣಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿರುತ್ತದೆ ಎಂದು ತಿಳಿಸಿದರು.
ನಿಬಂಧನೆಗಳು ಉಲ್ಲಂಘನೆಯಾದಲ್ಲಿ ಸಂಬಂಧಪಟ್ಟವರ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss