ಹೊಸದಿಗಂತ ಡಿಜಿಟಲ್:
ಜುಲೈ ತಿಂಗಳಲ್ಲಿ ಬರೋಬ್ಬರಿ 2,832 ಪ್ರಯಾಣಿಕರಿಗೆ ದಂಡ ವಿಧಿಸುವ ಮೂಲಕ ಟಿಕೆಟ್ ರಹಿತ ಪ್ರಯಾಣಿಸುವ ಮಂದಿಗೆ ಕೆಎಸ್‌ಆರ್‌ಟಿಸಿ ಭರ್ಜರಿ ಬಿಸಿಮುಟ್ಟಿಸಿದೆ.
ಈ ಬಗ್ಗೆ ಅಂಕಿ ಅಂಶ ಬಿಡುಗಡೆ ಮಾಡಿರುವ ನಿಗಮ, ಜುಲೈ ತಿಂಗಳಿನಲ್ಲಿ 43,698 ವಾಹನಗಳನ್ನು ತನಿಖೆಗೊಳಪಡಿಸಲಾಗಿದೆ. ಈ ವೇಳೆ ಒಟ್ಟು 2,832 ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ. ಟಿಕೆಟ್ ರಹಿತ ಪ್ರಯಾಣಿಕರಿಂದ 4,46,853ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಹೇಳಿದೆ.
ಇನ್ನು ನಿಗಮದ ಆದಾಯದಲ್ಲಿ ಸೋರಿಕೆಯಾಗುತ್ತಿದ್ದ 63,914 ರೂ.ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದು, ತಪ್ಪಿತಸ್ಥರ ವಿರುದ್ಧ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ ಎಂದೂ ಹೇಳಿದೆ. ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್, ಪಾಸ್ ಪಡೆದು ಪ್ರಯಾಣ ಮಾಡುವಂತೆಯೂ ನಿಗಮ ಮನವಿ ಮಾಡಿದೆ.