Wednesday, August 10, 2022

Latest Posts

ಕೇರಳ ರಾಜ್ಯಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್‌ಗಳನ್ನು ಪುನರಾರಂಭಿಸಲು ಸೂಚನೆ: ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೇರಳ ರಾಜ್ಯಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್‌ಗಳನ್ನು ಪುನರಾರಂಭಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಆದೇಶ ಹೊರಡಿಸಿದ್ದು, ಇದೇ ತಿಂಗಳ 12 ರಿಂದ ಬೆಂಗಳೂರು, ಮೈಸೂರು, ಮಂಗಳೂರು, ಪುತ್ತೂರು ಒಳಗೊಂಡಂತೆ ರಾಜ್ಯದ ವಿವಿಧ ಸ್ಥಳಗಳಿಂದ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಸಂಸ್ಥೆ ತಿಳಿಸಿದೆ.
ಕರ್ನಾಟಕ ಸರ್ಕಾರದ ಮಾರ್ಗಸೂಚಿಯಂತೆ ಕೇರಳದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರು, 72 ಗಂಟೆಯೊಳಗೆ ಕೋವಿಡ್ ಟೆಸ್ಟ್ ಮಾಡಿಸಿ ಕೋವಿಡ್ ನೆಗೆಟಿವ್ ರಿಪೋರ್ಟ್ ತರಬೇಕು ಅಥವಾ ಕನಿಷ್ಠ ಒಂದು ವ್ಯಾಕ್ಸಿನ್ ಹಾಕಿಸಿರುವ ಪ್ರಮಾಣ ಪತ್ರವನ್ನ ಹೊಂದಿರಬೇಕು ಎಂದು ಹೇಳಿದೆ.
ಶಿಕ್ಷಣ, ವ್ಯವಹಾರ ಇನ್ನಿತರೆ ಕಾರಣಕ್ಕೆ ನಿತ್ಯ ಪ್ರಯಾಣ ಮಾಡುವ ಪ್ರಯಾಣಿಕರು 15 ದಿನಗಳಿಗೊಮ್ಮೆ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಮಾಡಿಸಿ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿ ಹೊಂದಿರಬೇಕು ಎಂದು ಸಂಸ್ಥೆ ತಿಳಿಸಿದೆ.
ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್‌ ಧರಿಸುವುದು, ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸಲು ಮುಖ್ಯ ಸಂಚಾರ ವ್ಯವಸ್ಥಾಪಕರು ಕೋರಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss