ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಂಡಸರಿಗೂ ಬಸ್ ಫ್ರೀ ಕೊಟ್ರೆ ಕೆಎಸ್ಆರ್‌ಟಿಸಿ ಮುಚ್ಚಬೇಕಾಗುತ್ತೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ 100 ಹಾಸಿಗೆ ಆಸ್ಪತ್ರೆ ಕಟ್ಟಡಕ್ಕೆ ಸಿಎಂ ಶಂಕುಸ್ಥಾಪನೆ ನೆರವೇರಿಸಿ, ಆ ಬಳಿಕ ಮಹಿಳೆಯರಿಗೆ ಫ್ರೀ ಬಸ್ ವ್ಯವಸ್ಥೆ ಕುರಿತು ಮಾತನಾಡುವ ವೇಳೆ, ಗಂಡಸರಿಗೂ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಸಿಎಂ ಗಂಡಸರಿಗೂ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಿದ್ರೆ KSRTC ಮುಚ್ಚಬೇಕಾಗುತ್ತೆ ಎಂದಿದ್ದಾರೆ.