March 2, 2026
Monday, March 2, 2026
spot_img

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಭೇಟಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಭಾನುವಾರ ಸಂಜೆ ಭೇಟಿ ನೀಡಿದ್ದಾರೆ.

ಬೆಂಗಳೂರು ಜಕ್ಕೂರು ವಿಮಾನ ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೇಳಿಕಾಫ್ಟರ್ ಮೂಲಕ ಹೊರಟು 5.30ಕ್ಕೆ ಕಡಬ ತಾಲೂಕಿನ ಬಿಳಿನೆಲೆ ಹೆಲಿಪ್ಯಾಡ್ಗೆ ಆಗಮಿಸಿ ಅಲ್ಲಿಂದ ರಸ್ತೆಮೂಲಕ ಕಾರಿನಲ್ಲಿ ಬಿಗಿಭದ್ರತೆಯೊಂದಿಗೆ ಕುಕ್ಕೇ ಸುಬ್ರಹ್ಮಣ್ಯಕ್ಕೆ ಆಗಮಿಸಿದರು.

ಕುಕ್ಕೆಗೆ ಆಗಮಿಸಿದ ಮಾಜಿ ಪ್ರಧಾನಿಗಳಿಗೆ ಶ್ರೀ ದೇವಳದ ಪರವಾಗಿ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಸ್ವಾಗತಿಸಿ ಬರಮಾಡಿಕೊಂಡರು.

ಬಳಿಕ ಅತಿಥಿಗೃಹದಲ್ಲಿ ವಿಶ್ರಾಂತಿ ಪಡೆದ ಅವರು ರಾತ್ರಿ ಮಹಾಪೂಜೆಯಲ್ಲಿ ಪಾಲ್ಗೊಂಡು ಉತ್ಸವಾದಿಗಳನ್ನು ವೀಕ್ಷಿಸಿದರು. ನಂತರ ಪ್ರಸಾದ ಬೋಜನ ಸ್ವೀಕರಿಸಿದರು. ಸೋಮವಾರ ಆಶ್ಲೇಷ ಬಲಿ ಸೇವೆ ನೆರವೇರಿಸಲಿದ್ದಾರೆ.

ಈ ಸಂದರ್ಭ ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವಗೌಡ, ರಾಜ್ಯ ವಕ್ತಾರರದ ಎಂ.ಬಿ. ಸದಾಶಿವ,ಪ್ರಮುಖರಾದ ದಯಾಕರ ಆಳ್ವ,ಸಂತೋಷ್ ಜಾಕೆ, ಮಾಜಿ ಜಿಲ್ಲಾಪಂಚಾಯತ್ ಸದಸ್ಯ ಸಯ್ಯದ್ ಮೀರಾ ಸಾಹೇಬ್,ಕೇನ್ಯ ರವೀಂಧ್ರನಾಥ ಶೆಟ್ಟಿ, ಶಶಿರಾಜ್ ಶೆಟ್ಟಿ ಮಂಗಳೂರು, ಉಮೇಶ್ ಕುಮಾರ್ ಗೌಡ ಬಂಟ್ವಾಳ, ಚಂದ್ರಶೇಖರ ಗೌಡ ಕೂಡಿಂಬಾಳ, ಶಿಷ್ಟಚಾರ ಅಧಿಕಾರಿ ಜಯರಾಮ ರಾವ್, ವೈದ್ಯಧಿಕಾರಿ ಮಂಜುನಾಥ್ ಸುಳ್ಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಹಾಗೂ ಸುಬ್ರಹ್ಮಣ್ಯ ಠಾಣಾಧಿಕಾರಿ ಆಂಜನೇಯ ರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !