Monday, November 3, 2025

ಮೂರನೇ ಟಿ20ಗೆ ಕುಲ್ದೀಪ್‌ ಔಟ್‌? ಅರ್ಷದೀಪ್‌ಗೆ ಅವಕಾಶ: ಟೀಂ ಇಂಡಿಯಾದಲ್ಲಿ ಬದಲಾವಣೆ ಖಚಿತ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟಿ20 ಪಂದ್ಯ ನಾಳೆ (ನವೆಂಬರ್ 2) ಹೋಬರ್ಟ್‌ನ ಬೆಲ್ಲೆರಿವ್ ಓವಲ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್‌ ಇಂಡಿಯಾ ತನ್ನ ಆಟಗಾರರ ಪಟ್ಟಿಯಲ್ಲಿ ಒಂದು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಸ್ಪಷ್ಟವಾಗಿದೆ.

ಎಂಸಿಜಿ ಮೈದಾನದಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಕುಲ್ದೀಪ್‌ ಯಾದವ್‌ ಪ್ರದರ್ಶನ ನಿರೀಕ್ಷಿತ ಮಟ್ಟಕ್ಕಿಲ್ಲದಿದ್ದರಿಂದ ಅವರನ್ನು ಹೊರಗಿಡುವ ಸಾಧ್ಯತೆ ಇದೆ. ಅವರು ಆ ಪಂದ್ಯದಲ್ಲಿ 2 ವಿಕೆಟ್ ಪಡೆದರೂ ಕೇವಲ 20 ಎಸೆತಗಳಲ್ಲಿ 45 ರನ್‌ಗಳನ್ನು ನೀಡಿದ್ದರು. ಹೀಗಾಗಿ ಮುಂದಿನ ಪಂದ್ಯದಲ್ಲಿ ಹಿರಿಯ ಸ್ಪಿನ್ನರ್‌ ಬದಲಿಗೆ ಹೊಸ ಆಯ್ಕೆಗೆ ಅವಕಾಶ ನೀಡಬಹುದು ಎನ್ನಲಾಗಿದೆ.

ಅವರ ಸ್ಥಾನಕ್ಕೆ ಎಡಗೈ ವೇಗಿ ಅರ್ಷದೀಪ್‌ ಸಿಂಗ್‌ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅದೇ ವೇಳೆ ಹರ್ಷಿತ್‌ ರಾಣಾ ಬೌಲಿಂಗ್‌ನಲ್ಲಿ ಹೆಚ್ಚಿನ ಯಶಸ್ಸು ಕಾಣದಿದ್ದರೂ ಬ್ಯಾಟಿಂಗ್‌ನಲ್ಲಿ 35 ರನ್‌ಗಳ ಕೊಡುಗೆ ನೀಡಿದ್ದರು. ಇದರಿಂದ ಅವರನ್ನು ಆಲ್‌ರೌಂಡರ್‌ ಆಗಿ ಮೂರನೇ ಟಿ20ದಲ್ಲಿಯೂ ಉಳಿಸುವ ಸಾಧ್ಯತೆ ಇದೆ.

ಹೀಗಾಗಿ ಹೋಬರ್ಟ್‌ನಲ್ಲಿ ನಡೆಯಲಿರುವ ಮೂರನೇ ಟಿ20 ಪಂದ್ಯದಲ್ಲಿ ಭಾರತದ ಸಂಭಾವ್ಯ ತಂಡ ಹೀಗಿರಬಹುದು — ಶುಭ್‌ಮನ್ ಗಿಲ್‌, ಅಭಿಷೇಕ್‌ ಶರ್ಮಾ, ತಿಲಕ್‌ ವರ್ಮಾ, ಸೂರ್ಯಕುಮಾರ್‌ ಯಾದವ್‌, ಸಂಜು ಸ್ಯಾಮ್ಸನ್‌ (ವಿಕೆಟ್ ಕೀಪರ್‌), ಶಿವಂ ದುಬೆ, ಅಕ್ಷರ್‌ ಪಟೇಲ್‌, ಹರ್ಷಿತ್‌ ರಾಣಾ, ವರುಣ್‌ ಚಕ್ರವರ್ತಿ, ಜಸ್‌ಪ್ರೀತ್‌ ಬುಮ್ರಾ ಮತ್ತು ಅರ್ಷದೀಪ್‌ ಸಿಂಗ್‌.

error: Content is protected !!