ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಮೇಲೆ ಹಲ್ಲೆ ನಡೆಸಿದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ದಿಲ್ಲಗೆ ಹೊರಟಿದ್ದ ತನಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಈಕೆ ಹಲ್ಲೆ ನಡೆಸಿ, ನಿಂದಿಸಿದ್ದಾರೆ ಎಂದು ಕಂಗನಾ ದೂರಿನ ಹಿನ್ನಲೆಯಲ್ಲಿ ಅವರನ್ನು ಬಂಧಿಸಿ ಆ ಬಳಿಕ ಅಮಾನತುಗೊಳಿಸಲಾಗಿತ್ತು. ಇದೀಗ ಅಮಾನತು ಅವಧಿ ಮುಕ್ತಾಯಗೊಂಡ ಬಳಿಕ ಮತ್ತೆ ಕರ್ತವ್ಯಕ್ಕೆ ಸೇರಿಸಿಕೊಳ್ಳಲಾಗಿದ್ದು, ಬೆಂಗಳೂರಿಗೆ ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆದರೆ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಗಳು ಬಹಿರಂಗಗೊಂಡಿಲ್ಲ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ