ಸೊರಬ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ ಬಂಗಾರಪ್ಪ ನಾಮಪತ್ರ ಸಲ್ಲಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್‌ :

ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಸೊರಬ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ ಬಂಗಾರಪ್ಪ ಇಂದು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ರಂಗನಾಥ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದಿಂದ ತಾಲೂಕು ಕಚೇರಿವರೆಗೆ ನಡೆದ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು.

ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗಿಯಾಗಿದ್ದು ವಿಶೇಷವಾಗಿತ್ತು. ನಂತರ ತಾಲೂಕು ಕಚೇರಿಗೆ ತೆರಳಿ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!