ಯತೀಂದ್ರ ವಿರುದ್ಧ ಕುಮಾರಸ್ವಾಮಿ ಆರೋಪ: ದಾಖಲೆ ಸಮೇತ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

‘ತಾ ಕಳ್ಳ ಇತರರ ನಂಬ’ಎಂಬ ಗಾದೆ ಮಾತನ್ನು ಒಬ್ಬ ಮಾಜಿ ಮುಖ್ಯಮಂತ್ರಿ ಬಗ್ಗೆ ಬಳಸಬೇಕಾದ ಸ್ಥಿತಿ ಬಂದದ್ದಕ್ಕೆ ನನಗೆ ವಿಷಾದ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವರುಣಾ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿ ದುರಸ್ತಿಯಾಗಬೇಕಾದ ಶಾಲಾ ಕೊಠಡಿಗಳ ವಿವರದ ದಾಖಲೆಯನ್ನು ಎಕ್ಸ್ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಡಾ. ಯತೀಂದ್ರ ಅವರ ಜೊತೆಗಿನ ಫೋನ್ ಸಂಭಾಷಣೆ ಹಿನ್ನೆಲೆಯನ್ನು ಸ್ಪಷ್ಟಪಡಿಸಿದರು.

ಫೋನ್ ಸಂಭಾಷಣೆಯಲ್ಲಿ ಡಾ ಯತೀಂದ್ರ ಹೆಸರಿಸಿದ ವಿವೇಕಾನಂದ ಅವರು, ವರುಣಾ ಕ್ಷೇತ್ರಕ್ಕೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ). ವರುಣಾ ಕ್ಷೇತ್ರಕ್ಕೆ ಸೇರಿರುವ ಹಾರೋಹಳ್ಳಿ, ಕೀಳನಪುರ, ದೇವಲಾಪುರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಐದು ಸರ್ಕಾರಿ ಶಾಲೆಗಳ ರಿಪೇರಿಯಾಗಬೇಕಾಗಿರುವ ಕೊಠಡಿಗಳ ವಿವರದ ಪಟ್ಟಿಯನ್ನು ಬಿಇಒ ಅವರೇ ನನ್ನ ಕಚೇರಿಯ ಜಂಟಿ ಕಾರ್ಯದರ್ಶಿಗಳಿಗೆ ಕಳುಹಿಸಿದ್ದರು. ಇದರ ಬಗ್ಗೆಯೇ ನಾನು ಡಾ. ಯತೀಂದ್ರ ಅವರ ಜೊತೆಯಲ್ಲಿ ಮಾತನಾಡಿದ್ದು. ಇದಕ್ಕೆ ಸಂಬಂಧಿಸಿದ ದಾಖಲೆಯನ್ನು ಇಲ್ಲಿ ಲಗತ್ತಿಸಿದ್ದೇನೆ ಎಂದಿದ್ದಾರೆ.

https://twitter.com/siddaramaiah/status/1725103278504218803?ref_src=twsrc%5Etfw%7Ctwcamp%5Etweetembed%7Ctwterm%5E1725103278504218803%7Ctwgr%5E307828c340564ad963fcf98cd1a08cc3a550d8f1%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Fetvbharatkannada-epaper-etvbhkn%2Fhomenews-updates-homenews%3Fmode%3Dpwaaction%3Dclick

ಸುಳ್ಳುಕೋರರ ನಂಜಿನ ಆರೋಪಗಳಿಗೆ ವಿವರಣೆ ನೀಡಬೇಕಾದ ಅಗತ್ಯ ಖಂಡಿತ ಇಲ್ಲ. ಆದರೆ, ಮಾಧ್ಯಮಗಳಲ್ಲಿ ಪ್ರಸಾರ, ಪ್ರಕಟವಾಗುತ್ತಿರುವ ಸುಳ‍್ಳು ಸುದ್ದಿಗಳನ್ನು ಅಮಾಯಕ ಜನ ನಂಬಿ ತಪ್ಪು ತಿಳಿದುಕೊಳ್ಳಬಾರದು ಎನ್ನುವ ಕಾರಣಕ್ಕೆ ಈ ವಿವರವನ್ನು ನೀಡಿದ್ದೇನೆ. ಸುಳ್ಳು, ಮೋಸ, ದ್ರೋಹ, ವಚನಭ್ರಷ್ಟತೆಗಳನ್ನೇ ಅಸ್ತ್ರಮಾಡಿಕೊಂಡು ಗಳಿಸಿದ ಅಧಿಕಾರವನ್ನು ಕೇವಲ ಹಣದ ಲೂಟಿಗಾಗಿ ದುರ್ಬಳಕೆ ಮಾಡಿಕೊಂಡ ಕುಮಾರಸ್ವಾಮಿ ಅವರಿಗೆ ಅಭಿವೃದ್ದಿಯ ವಿಚಾರ ಅರ್ಥವಾಗುವಂತಹದ್ದಲ್ಲ ಎಂದು ಟೀಕಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!