ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ನಾನೇನೂ ಮಾತನಾಡುವುದಿಲ್ಲ, ಹಿಂದೆಯೂ ಮಾತನಾಡಿಲ್ಲ, ಮುಂದೆಯೂ ಮಾತನಾಡುವುದಿಲ್ಲ. ಕುಮಾರಸ್ವಾಮಿ ಹಾಗೂ ಅಮಿತ್ ಶಾ ಅವರು ಈ ಬಗ್ಗೆ ಮಾತನಾಡ್ತಾರೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.
ನನ್ನ ಗಮನ ಸದ್ಯ ಕಾವೇರಿ ವಿವಾದದ ಕಡೆಗೆ ಇದೆ, ರೈತರಿಗೆ ನನ್ನ ಸಂಪೂರ್ಣ ಬೆಂಬಲವಿದೆ. ಯಾವುದೇ ಸರ್ಕಾರ ಇರಲಿ ಕಾವೇರಿ ವಿಷಯಕ್ಕೆ ಒಗ್ಗಟ್ಟು ಮುಖ್ಯ. ತಮಿಳುನಾಡು ರೀತಿಯಲ್ಲೇ ನಮ್ಮ ಸರ್ಕಾರ ಕೂಡ ಸಮರ್ಥವಾಗಿ ವಾದ ಮಾಡಬೇಕು. ಸುಪ್ರೀಂ ತೀರ್ಪಿನ ಬಗ್ಗೆ ಮಾತನಾಡುವುದಿಲ್ಲ, ನಮ್ಮ ವಾದ ಇನ್ನಷ್ಟು ಗಟ್ಟಿಯಾಗಬೇಕಿತ್ತು ಎಂದಿದ್ದಾರೆ.