ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಇಂದು ಬಿಜೆಪಿ-ಜೆಡಿಎಸ್ ನಾಯಕರ ಸಭೆಯ ವೇಳೆ ಸುದ್ದಿಗೋಷ್ಠಿಯಲ್ಲೇ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ ಆಗಿದೆ. ತಕ್ಷಣ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು.
ಆಸ್ಪತ್ರೆಗೆ ದಾಖಲಿಸಿದ ನಂತರ ವೈದ್ಯರು ತಕ್ಷಣ ಚಿಕಿತ್ಸೆಗೆ ಒಳಪಡಿಸಿದ್ದಾರೆ.
ಬಳಿಕ ಮಾಹಿತಿ ನೀಡಿದ ವೈದ್ಯರು, ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಂಪೂರ್ಣ ಪರೀಕ್ಷೆಗೆ ಒಳಪಡಿಸಿದ ನಂತರ ಸ್ಪಷ್ಟ ಮಾಹಿತಿ ಸಿಗಲಿದೆ ಎಂದು ಹೇಳಿದರು.
ಹಿಂದೆ ಎಚ್‍ಡಿ ಕುಮಾರಸ್ವಾಮಿಗೆ ಮೈಂಡ್ ಸ್ಟ್ರೋಕ್, ಹಾರ್ಟ್ ಸರ್ಜರಿ ಹಿನ್ನೆಲೆಯಲ್ಲಿ ರಕ್ತ ಹೆಪ್ಪುಗಟ್ಟದಂತೆ ಮಾಡುವ ಚಿಕಿತ್ಸೆ ಪಡೆದಿರಬಹುದು ಅಥವಾ ಔಷಧಿಗೆ ಒಳಪಟ್ಟಿರುವ ಸಾಧ್ಯತೆ ಇದೆ. ಹೀಗಾಗಿ ಎಚ್ ಡಿ ಕುಮಾರಸ್ವಾಮಿಗೆ ಮೂಗಿನಿಂದ ರಕ್ತಸ್ರಾವ ಆಗಿದೆ ಎಂದು ಜಯನಗರದ ಅಪೋಲೋ ಆಸ್ಪತ್ರೆಯ ವೈದ್ಯರು ಪ್ರಾಥಮಿಕ ಮಾಹಿತಿ ನೀಡಿದರು.