60% ಕಮೀಷನ್‌ಗೆ ದಾಖಲೆ ಕೇಳಿದ್ದ ಸಿದ್ದರಾಮಯ್ಯಗೆ ಕುಮಾರಸ್ವಾಮಿ ತಿರುಗೇಟು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಸರ್ಕಾರದ ಮೇಲೆ ಹೆಚ್‌ಡಿಕೆ ಮಾಡಿದ್ದ 60% ಕಮೀಷನ್ ಆರೋಪಕ್ಕೆ ದಾಖಲೆ ಕೇಳಿದ್ದ ಸಿಎಂಗೆ ಇದೀಗ ಕೇಂದ್ರ ಸಚಿವ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಸಿದ್ದರಾಮಯ್ಯರನ್ನ ಹಿಟ್ ಅಂಡ್ ರನ್ ಎಂದು ಲೇವಡಿ ಮಾಡಿದ್ದಾರೆ.

ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮಾನ್ಯ ಮುಖ್ಯಮಂತ್ರಿಗಳೇ? ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು, ತುಮಕೂರಿನ ನಿಮ್ಮ ಕಾಂಗ್ರೆಸ್​ ಪಕ್ಷದ ಮುಖಂಡರೇ ಮಾಡಿದ ಆರೋಪ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ. ಆ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿರುವ ಅವರು, 60% ಕಮಿಷನ್​​ ವಿಚಾರವಾಗಿ ದಾಖಲೆ ಕೊಡಿ ಎಂದಿದ್ದ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.

ನಮ್ಮ ಪಕ್ಷದ ಸರಕಾರಕ್ಕಿಂತ ಹಿಂದಿನ ರಾಜ್ಯ ಬಿಜೆಪಿ ಸರಕಾರವೇ ವಾಸಿ ಇತ್ತು ಎಂದು ಅಲವತ್ತುಕೊಂಡಿದ್ದರು ನಿಮ್ಮ ಪಕ್ಷದ ಗುತ್ತಿಗೆದಾರರು! ಕಾಂಗ್ರೆಸ್ ಸರಕಾರದಲ್ಲೂ 40% ಕಮೀಶನ್ ಸುಲಿಗೆ ಮಾಡಲಾಗುತ್ತಿದೆ ಎಂಬುದು ಅವರ ನೇರವಾಗಿ ಆರೋಪಿಸಿದ್ದರು. ಕಮೀಶನ್ ವ್ಯವಹಾರ ಇಲ್ಲ ಎಂದಾದರೆ, ‘ಯಾಕಪ್ಪಾ ಹಾಗೆ ಹೇಳಿದಿರಿ?’ ಎಂದು ಅವರನ್ನೇ ಕರೆದು ಕೇಳಬೇಕಿತ್ತು. ಕೇಳಲಿಲ್ಲ ಯಾಕೆ ಎಂದು ಪ್ರಶ್ನಿಸಿದ್ದಾರೆ.

ಪ್ರತಿ ಆರೋಪಕ್ಕೂ ಈಗ ದಾಖಲೆ ಕೇಳುವ ನೀವು, ಬಿಜೆಪಿ ಸರಕಾರದ ಮೇಲೆ 40% ಕಮೀಶನ್ ಆರೋಪ ಮಾಡಿ, ಪುಟಗಟ್ಟಲೇ ಜಾಹೀರಾತು ಕೊಟ್ಟರಲ್ಲಾ.. ಆಗ ಎಷ್ಟು ದಾಖಲೆ ನೀಡಿದ್ದೀರಿ? ನಿಮ್ಮ ರಾಜಕೀಯ ಜೀವನದಲ್ಲಿ ಎಂದಾದರೂ ದಾಖಲೆ ಇಟ್ಟು ಆರೋಪ ಮಾಡಿದ್ದೀರಾ?

ದಾವಣಗೆರೆ ಗುತ್ತಿಗೆದಾರನೊಬ್ಬ ದಯಾಮರಣ ಕರುಣಿಸಿ ಎಂದು ನಿಮ್ಮ ಘನ ಸನ್ನಿಧಾನಕ್ಕೆ ಹಾಗೂ ಮಾನ್ಯ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಅವರಿಗೆ ಬಾಕಿ ಹಣ ಕೊಡಿಸುತ್ತೀರೋ ಅಥವಾ ದಯಾಮರಣ ಕರುಣಿಸುತ್ತೀರೋ..? ಕಮೀಶನ್ ದುರಾಸೆ ಬಿಟ್ಟು ಮೊದಲು ಆ ಗುತ್ತಿಗೆದಾರನನ್ನು ರಕ್ಷಿಸಿ. 60% ಕಮೀಶನ್! ಮುಖ್ಯಮಂತ್ರಿ ಹಿಟ್ ಅಂಡ್ ರನ್!! ಎಂದು ವಾಗ್ದಾಳಿ ಮಾಡಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!