ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರ ಆರು ತಿಂಗಳಲ್ಲಿ ಪತನವಾಗಲಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಅವರ ಮಾತಿಗೆ ಮೂರು ಕಾಸಿನ ಕಿಮ್ಮತ್ತಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದಸಿದ್ದರಾಮಯ್ಯ, ಕುಮಾರಸ್ವಾಮಿ ಮಾತಿಗೆ ಬೆಲೆ ಇದ್ಯಾ?ಅವರು ಭ್ರಮೆಯಲ್ಲಿ ಇದ್ದಾರೆ. ಹಾಗಾಗಿ ಏನೇನೋ ಮಾತಾಡ್ತಿದ್ದಾರೆ ಎಂದು ಹೇಳಿದರು.
ಕುಮಾರಸ್ವಾಮಿ ಚುನಾವಣೆಯಲ್ಲಿ ಸಮ್ಮಿಶ್ರ ಸರ್ಕಾರ ಬರತ್ತೆ, ನಾನೇ ಸಿಎಂ ಆಗಿ ಬಿಡ್ತಿನಿ ಎಂಬ ಭ್ರಮೆಯಲ್ಲಿದ್ದರು. ಆದರೆ ಹಾಗಾಗಲಿಲ್ಲ. ಅದೇ ಭ್ರಮೆಯಲ್ಲಿ ಈಗಲೂ ಚಡಪಡಿಸುತ್ತಾ ಏನೇನೋ ಮಾತಾಡ್ತಿದ್ದಾರೆ ಪಾಪ ಎಂದು ತಿರುಗೇಟು ನೀಡಿದರು.